ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ: 24 ಜನವರಿ 2023

ಕಾಯಂ ನ್ಯಾಯಮೂರ್ತಿಯಾಗಿ ನೇಮಕ: 8 ಜನವರಿ 2025

ನಿವೃತ್ತಿ ದಿನಾಂಕ: 31 ಮೇ 2037

ವೃತ್ತಿಪರ ಪರಿಚಯ:

ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಥವರ್ಯನಾಯಕ್ ಅವರು ಚಿತ್ರದುರ್ಗದವರು. ಅಲ್ಲಿನ ಎಸ್.ಜೆ.ಎಂ. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಮೂರನೇ ರ‍್ಯಾಂಕ್ ಗಳಿಸಿದರು. ನಂತರ ಕುವೆಂಪು ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪಡೆದರು. 2 ಜನವರಿ 2012ರಂದು ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ಉಡುಪಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ (ಆಡಳಿತ) ಹಾಗೂ ರಾಜ್ಯ ಸರ್ಕಾರದ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದರು. 24 ಜನವರಿ 2023ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು, 8 ಜನವರಿ 2025ರಂದು ಕಾಯಂ ನ್ಯಾಯಮೂರ್ತಿಯಾದರು.