ನೇಮಕಾತಿ ದಿನಾಂಕ: 30 ಸೆಪ್ಟೆಂಬರ್ 2025
ನಿವೃತ್ತಿ ದಿನಾಂಕ: 30 ಡಿಸೆಂಬರ್ 2028
ವೃತ್ತಿಪರ ಪರಿಚಯ:
ನ್ಯಾಯಮೂರ್ತಿ ಬೋರ್ಕಟ್ಟೆ ಮುರಳೀಧರ ಪೈ ಅವರು 31 ಡಿಸೆಂಬರ್ 1966ರಂದು ಜನಿಸಿದರು. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೋರ್ಕಟ್ಟೆ ಅವರ ಮೂಲಸ್ಥಳ. 11 ಫೆಬ್ರವರಿ 1997ರಂದು ಸಿವಿಲ್ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆಗೆ ಸೇರಿದರು. ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಹಿರಿಯ ಬೋಧಕ ಸದಸ್ಯರಾಗಿ, ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಆಗಿ ಮತ್ತು ಮಂಗಳೂರು ಹಾಗೂ ಬೆಳಗಾವಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಕರ್ನಾಟಕ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಹಾಗೂ ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾಗಿಯೂ ಕಾರ್ಯನಿರ್ವಹಿಸಿದರು. 30 ಸೆಪ್ಟೆಂಬರ್ 2025ರಂದು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು.
